Featured

ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ – Vishwanews24

ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ

ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್  ಬಳಿ ನಡೆದಿದೆ.

ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್‍ಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಬೈಕ್‍ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿತ್ತು. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

ಬೀಚ್‍ಗೆ 4 ಜನ ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದ ವರದಿಯಾಗಿತ್ತು.

ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago