ಮಂಗಳೂರು: ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ಇಬ್ಬರ ಮೃತದೇಹ ಪತ್ತೆಯಾದ ಘಟನೆ ಅ.19 ರ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂಬಂಧದಲ್ಲಿ ಇಬ್ಬರು ಅತ್ತಿಗೆ ಹಾಗೂ ಭಾವ ಎಂದು ತಿಳಿದು ಬಂದಿದೆ.
ಬೆಂಗಳೂರು ಮೂಲದರಾಗಿರುವ ಇವರು ಮನೆಯಲ್ಲಿ ಯಾರಿಗೂ ಹೇಳದೇ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಶವಗಳನ್ನು ಮೇಲೆತ್ತಿದ್ದು, ಶವಾಗಾರದಲ್ಲಿ ಇಡಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…