Missing red rubber stamp vector isolated
ಮಂಗಳೂರು: ಬಸ್ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣಕ್ಕೆ ಬಂದಿದ್ದರು.
ಇನ್ನು ಬಸ್ ನಿಲ್ದಾಣದಲ್ಲಿ ಪಿಲಿಕುಳದ ಬಸ್ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ ಬರದಿದ್ದಾಗ ಪತಿ ಕೂಡಲೇ ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಬಳಿಕ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್ ಮತ್ತು ಹಸುರು ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…