Featured

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ ! – Vishwnaews24

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ – Vishwnaews24

ಮಂಗಳೂರು: ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು.

ಇನ್ನು ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ ಬರದಿದ್ದಾಗ ಪತಿ ಕೂಡಲೇ ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್‌ ಮತ್ತು ಹಸುರು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

10 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

11 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

11 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

11 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

12 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

13 hours ago