ಮಂಗಳೂರು: ಬಜರಂಗದಳದವರಿಗೆ ಪಬ್ ಮೇಲೆ ದಾಳಿ ನಡೆಸುವುದಕ್ಕೆ, ಪೊಲೀಸ್ ಗಿರಿ ಮಾಡ್ಲಿಕ್ಕೆ ಅಧಿಕಾರ ಕೊಟ್ಟವರ್ಯಾರು?. ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಒತ್ತಾಯಿಸಿದ್ದಾರೆ.
ನಿನ್ನೆ ಬಲ್ಮಠದಲ್ಲಿರುವ ಪಬ್ ದಾಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನಡೆದ ಪಬ್ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. 2009 ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇದೇ ಪಬ್‌ಗೆ ದಾಳಿ ನಡೆದಿತ್ತು.
ಇದೀಗ ಮತ್ತೆ ಇಂದು ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಳಿ ನಡೆದಿದೆ. ಬಜರಂಗದಳದವರಿಗೆ ಪೊಲೀಸ್ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು.
ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್ ಇಲಾಖೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ಅಲ್ಲಿ ಅನೈತಿಕ ಚಟುವಟಿಕೆ ಅಥವಾ ಕಾನೂನು ಉಲ್ಲಂಘನೆ ನಡೆಯುತ್ತಿದ್ದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ.
ಇದನ್ನೂ ಓದಿ : ಚೆನ್ನೈ: ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ
ಮಂಗಳೂರಿನಲ್ಲಿ ಬೇರೆ ಪಬ್‌ಗಳೇ ಇಲ್ಲವೇ? ಎಲೆಕ್ಷನ್ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದರು.
ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇವರನ್ನು ಯಾರು ಕೇಳುವರ್ಯಾರು ಇಲ್ಲ ಅಂತ ಎನಿಸಿದ್ದಾರೆಯೇ? ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ.
ನಿನ್ನೆ ಪಬ್ ದಾಳಿಗೆ ಬಂದವರ ಹಿನ್ನೆಲೆ, ಯಾರು ಕಳುಹಿಸಿದ್ದಾರೆ ಹಾಗೂ ಬಂದವರ ಮೇಲೆ ಎಷ್ಟು ಕೇಸ್ ಇದೆ ಎಂಬುವುದನ್ನು ತನಿಖೆ ನಡೆಸಬೇಕು.
ಇಲ್ಲದಿದ್ದರೆ ವಿದ್ಯಾರ್ಥಿ ಸಂಘಟನೆಗಳನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಉಡುಪಿ : ಪಿಎಸ್ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…