Featured

ಮಂಗಳೂರು ಪಬ್‌ ದಾಳಿ : ಬಜರಂಗದಳದವರಿಗೆ ಪೊಲೀಸ್‌ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು ? : ಅಕ್ಷಿತ್‌ ಸುವರ್ಣ – Vishwanews24

ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು..

ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್‌ ಇಲಾಖೆ ಇಲ್ಲವೇ..

ಎಲೆಕ್ಷನ್‌ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ..

ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ..

ಪಬ್‌ ದಾಳಿಗೆ ಬಂದವರ ಮೇಲೆ ಎಷ್ಟು ಕೇಸ್‌ ಇದೆ ಎಂಬುವುದನ್ನು ತನಿಖೆ ನಡೆಸಬೇಕು..

ವಿದ್ಯಾರ್ಥಿ ಸಂಘಟನೆಗಳನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ..

ಜೆಡಿಎಸ್‌ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ

ಮಂಗಳೂರು: ಬಜರಂಗದಳದವರಿಗೆ ಪಬ್‌ ಮೇಲೆ ದಾಳಿ ನಡೆಸುವುದಕ್ಕೆ, ಪೊಲೀಸ್‌ ಗಿರಿ ಮಾಡ್ಲಿಕ್ಕೆ ಅಧಿಕಾರ ಕೊಟ್ಟವರ್ಯಾರು?. ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಜೆಡಿಎಸ್‌ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ ಒತ್ತಾಯಿಸಿದ್ದಾರೆ.

ನಿನ್ನೆ ಬಲ್ಮಠದಲ್ಲಿರುವ ಪಬ್‌ ದಾಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನಡೆದ ಪಬ್‌ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. 2009 ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇದೇ ಪಬ್‌ಗೆ ದಾಳಿ ನಡೆದಿತ್ತು.

ಇದೀಗ ಮತ್ತೆ ಇಂದು ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಳಿ ನಡೆದಿದೆ. ಬಜರಂಗದಳದವರಿಗೆ ಪೊಲೀಸ್‌ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು.

ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್‌ ಇಲಾಖೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ಅಲ್ಲಿ ಅನೈತಿಕ ಚಟುವಟಿಕೆ ಅಥವಾ ಕಾನೂನು ಉಲ್ಲಂಘನೆ ನಡೆಯುತ್ತಿದ್ದರೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿ.

ಇದನ್ನೂ ಓದಿ : ಚೆನ್ನೈ: ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ 

ಮಂಗಳೂರಿನಲ್ಲಿ ಬೇರೆ ಪಬ್‌ಗಳೇ ಇಲ್ಲವೇ? ಎಲೆಕ್ಷನ್‌ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದರು.

ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇವರನ್ನು ಯಾರು ಕೇಳುವರ್ಯಾರು ಇಲ್ಲ ಅಂತ ಎನಿಸಿದ್ದಾರೆಯೇ? ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ.

ನಿನ್ನೆ ಪಬ್‌ ದಾಳಿಗೆ ಬಂದವರ ಹಿನ್ನೆಲೆ, ಯಾರು ಕಳುಹಿಸಿದ್ದಾರೆ ಹಾಗೂ ಬಂದವರ ಮೇಲೆ ಎಷ್ಟು ಕೇಸ್‌ ಇದೆ ಎಂಬುವುದನ್ನು ತನಿಖೆ ನಡೆಸಬೇಕು.

ಇಲ್ಲದಿದ್ದರೆ ವಿದ್ಯಾರ್ಥಿ ಸಂಘಟನೆಗಳನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಉಡುಪಿ : ಪಿಎಸ್​ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago