Featured

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿ ಪಬ್‌ ಮೇಲೆ ಯಾವುದೇ ದಾಳಿ ನಡೆದಿಲ್ಲ. ಆದಾಗ್ಯೂ ಈ ಸಂಬಂಧ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ಹೇಳಿದ್ದಾರೆ.

ಘಟನೆ ನಡೆದ ಪಬ್‌ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಬಲ್ಮಠದ ರಿ-ಸೈಕಲ್ ರೆಸ್ಟೋರೆಂಟ್ ಕಮ್ ಪಬ್ ಬಹಳಷ್ಟು ವರ್ಷಗಳಿಂದ ಇದೆ. ಸೋಮವಾರ ರಾತ್ರಿ 9 ಗಂಟೆಗೆ ಸಂಘಟನೆಗೆ ಸೇರಿದ ಐದಾರು ಹುಡುಗರು ಬಂದು ಇಲ್ಲಿನ ಬೌನ್ಸರ್ ದಿನೇಶ್ ಅವರೊಂದಿಗೆ ಅಪ್ರಾಪ್ತ ಹುಡುಗ-ಹುಡುಗಿಯರು ಪಬ್‌ನಲ್ಲಿದ್ದಾರೆಂಬುದಾಗಿ ಹೇಳಿದ್ದಾರೆ. ಕೂಡಲೇ ಮ್ಯಾನೇಜರ್ ಒಳಗೆ ಹೋಗಿ ಪರಿಶೀಲಿಸಿದ್ದು, ಕಾಲೇಜೊಂದರ ವಿದ್ಯಾರ್ಥಿಗಳಿರುವುದನ್ನು ಗಮನಿಸಿ ತತ್‌ಕ್ಷಣ ಹೊರ ಹೋಗಲು ಹೇಳಿದ್ದಾರೆ. ಬೌನ್ದರ್ ಹೇಳಿದ ಪ್ರಕಾರ ಸಂಘಟನೆಯ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ ಮತ್ತು ಯಾವುದೇ ದಾಳಿಯನ್ನೂ ಮಾಡಿಲ್ಲ. ಹೊರಗಿನಿಂದಲೇ ಮಾತನಾಡಿ ಹಿಂತಿರುಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆ ಪಡೆಯಲಾಗಿದ್ದು, ಹೊರಗಿನ ವ್ಯಕ್ತಿಗಳು ಬಂದು ಐಡಿ, ಲೈಸೆನ್ಸ್‌ ಕೇಳಲು ಅವಕಾಶ ಇಲ್ಲ. ಈ ಬಗ್ಗೆ ಪರಾಮರ್ಶಿಸಲಾಗುವುದು. ಅಲ್ಲದೆ ಈ ಹಿಂದೆ ನಡೆದ ಕಾಲೇಜು ವಿದ್ಯಾರ್ಥಿಗಳ ಅಶ್ಲೀಲ ವೀಡಿಯೋ ಪ್ರಕರಣದ ವಿದ್ಯಾರ್ಥಿಗಳಿಗೂ ಈ ಘಟನೆಯಲ್ಲಿನ ವಿದ್ಯಾರ್ಥಿಗಳಿಗೂ ಸಂಬಂಧ ಇಲ್ಲ. ಅಂತಿಮ ಪದವಿ ವಿದ್ಯಾರ್ಥಿಗಳು ಪಬ್‌ಗೆ ಬಂದಿದ್ದು. ಅಲ್ಲನೆ ಪಬ್‌ನಲ್ಲಿ ಹಾಕಿರುವ ನಿಯಮ ಪ್ರಕಾರ 21 ವರ್ಷದ ಮೇಲಿನವರು ಬರಬಹುದು ಎಂದಿದೆ. ಘಟನೆ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಇದನ್ನೂ ಓದಿ : ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ ನಿಧನ – Vishwanews24 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago