ಮಂಗಳೂರು : ಪರಿಚಯಸ್ಥನಿಂದಲೇ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ : ಎಸ್.ಪಿ ರಿಷ್ಯಂತ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪರಿಚಯಸ್ಥನಿಂದಲೇ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ..

ಮಾಸ್ಕ್ ಹಾಗೂ ಟೋಪಿ ಧರಿಸಿ ಬಂದ  ಕೇರಳದ ಅಬೀನ್ ಎನ್ನುವ ಯುವಕದಿಂದ ಈ ಕೃತ್ಯ : ದ.ಕ ಎಸ್ ಪಿ ಸಿ ಬಿ ರಿಷ್ಯಂತ್ ಮಾಹಿತಿ ..

ದಕ್ಷಿಣ ಕನ್ನಡ : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ ಪಿ ಸಿ ಬಿ ರಿಷ್ಯಂತ್ ಪರಿಚಯಸ್ಥನಿಂದಲೇ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೂವರ ಪೈಕಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ಆಕೆಯನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಕೈಗೆ ಗಾಯವಾಗಿದೆ. ಘಟನೆ ನಡೆದ ಒಂದು ಗಂಟೆ ಒಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ : cm ಸಿದ್ದರಾಮಯ್ಯ – Vishwanews24

ಕಡಬದ ಸರ್ಕಾರಿ ಕಾಲೇಜಿನಲ್ಲಿ ಕೇರಳದ ಅಬೀನ್ ಎನ್ನುವ ಯುವಕದಿಂದ ಈ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಅಭಿನ್ ಆಸಿಡ್ ದಾಳಿ ನಡೆಸಿದ್ದಾನೆ. ಮಾಸ್ಕ್ ಹಾಗೂ ಟೋಪಿ ಧರಿಸಿ ಬಂದು ಅಭಿನ್ ಆಸಿಡ್ ಎರ್ಚಿದ್ದಾನೆ. ತಕ್ಷಣ ಕಡಬ ಆಸ್ಪತ್ರೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿ ನಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ದುರಾಡಳಿತ­ದಿಂದ ಭಾರತವು ಪಾಕಿಸ್ತಾನಕ್ಕಿಂತ ಹಿಂದೆ ಬಿದ್ದಿದೆ : ರಾಹುಲ್‌ ಗಾಂಧಿ ವಾಗ್ಧಾಳಿ – Vishwanews24

Leave a Reply