Featured

ಮಂಗಳೂರು: ಪರಿಷತ್ ಚುನಾವಣೆಗೆ ದ.ಕ.ದಿಂದ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್ -Vishwanews24

ಮಂಗಳೂರು: ಪರಿಷತ್ ಚುನಾವಣೆಗೆ ದ.ಕ.ದಿಂದ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್ -Vishwanews24

ಮಂಗಳೂರು, : ಪರಿಷತ್ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು ಪಡೆದುಕೊಳ್ಳಲಿದ್ದಾರೆ ಎನ್ನುವ ಲೆಕ್ಕಾಚಾರಗಳಿತ್ತು. ಅಲ್ಲದೆ, ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ.

ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ, ಬೊಮ್ಮಾಯಿ ಸಂಪುಟದಲ್ಲೂ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನೊಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಸದ್ಯ ಇದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮುಂದಿನ ಆಯ್ಕೆಯೂ ಕೂಡ ಇದಕ್ಕೆ ಹೊಂದಿಕೊಂಡಿರಲಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

13 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

13 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

13 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago