ಮಂಗಳೂರು : ಪಾರ್ಟ್ ಟೈಮ್ ಜಾಬ್ ಆಯ್ಕೆಯಾಗಿರುವುದಾಗಿ ಅಪರಿಚಿತನಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಮೊಬೈಲ್ ಗೆ ನ.26ರಂದು ಅಪರಿಚಿತ ವ್ಯಕ್ತಿಯಿಂದ ಸಂದೇಶವೊಂದು ಬಂದಿತ್ತು. ಪಾರ್ಟ್ ಟೈಮ್ ಜಾಬ್‌ಗೆ ತಾವು ಆಯ್ಕೆಯಾಗಿರುವುದಾಗಿ ಸಂದೇಶ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯು ಅದರಲ್ಲಿ ಒಂದು ಲಿಂಕ್ ಕಳುಹಿಸಿದ್ದ. ಲಿಂಕ್ ಕ್ಲಿಕ್ ಮಾಡಿ ವಾಟ್ಸ್‌ಆ್ಯಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಜತೆ ಆನ್‌ಲೈನ್ ಜಾಬ್ ವಿಷಯವಾಗಿ ಚಾಟ್ ಮಾಡಿದ್ದಾರೆ. ಜಾಬ್‌ನ ಸಂಪೂರ್ಣ ಮಾಹಿತಿ ತಿಳಿಯಲು ಅಪರಿಚಿತ ಟೆಲಿಗ್ರಾಂ ಲಿಂಕ್ ಕಳುಹಿಸಿದ್ದ. ಅದನ್ನು ಕ್ಲಿಕ್ ಮಾಡಿದಾಗ ವೆಬ್‌ಸೈಟ್‌ವೊಂದು ತೆರೆದುಕೊಂಡಿದೆ. ಅದರಲ್ಲಿ ದೂರುದಾರರು ಖಾತೆ ತೆರೆದು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಕ್ರಿಯೇಟ್ ಮಾಡಿದ್ದಾರೆ.
ಆನ್‌ಲೈನ್‌ನಲ್ಲಿ ವಸ್ತು ಆರ್ಡರ್ ಮಾಡಿ ಕಮಿಷನ್ ಪಡೆಯಬಹುದು ಎಂದು ಆರೋಪಿ ತಿಳಿಸಿದ್ದಾನೆ. ಡಿ.5ರಂದು ಆಕ್ಸಿಸ್ ಬ್ಯಾಂಕ್ ಖಾತೆಯಿಂದ 200 ರೂ. ಹೂಡಿಕೆ ಮಾಡಿದ್ದಾರೆ. ಡಿ.6ರಂದು 380 ರೂ. ಜಮೆಯಾಗಿದೆ. ನಂತರದಲ್ಲಿ ಹೆಚ್ಚಿನ ಹಣ ತೊಡಗಿಸಿ ಲಾಭ ಗಳಿಸುವ ಉದ್ದೇಶದಿಂದ ದೂರುದಾರರು ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ ಮೂಲಕ 86 ಸಾವಿರ ರೂ., ಕೆನರಾ ಬ್ಯಾಂಕ್ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ 50 ಸಾವಿರ ರೂ., ಡಿ. 7ರಂದು ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್‌ಗೆ 30 ಸಾವಿರ ರೂ., ಯೆಸ್ ಬ್ಯಾಂಕ್ ಖಾತೆಗೆ 1.50 ಲಕ್ಷ ರೂ. ಹಾಗು ಕ್ಯೂಆರ್ ಕೋಡ್‌ಗೆ 20 ಸಾವಿರ ರೂ., ಐಸಿಐಸಿಐ ಬ್ಯಾಂಕ್ ಖಾತೆಗೆ 1.95 ಲಕ್ಷ ರೂ. ವರ್ಗಾಯಿಸಿದ್ದಾರೆ.
ಅಪರಿಚಿತ ವ್ಯಕ್ತಿ ತಿಳಿಸಿದ ಯೆಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಕ್ಯೂಆರ್ ಕೋಡ್ ಸ್ಕಾನ್ ಮೂಲಕ ಹಂತ ಹಂತವಾಗಿ 5.31 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…