ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ – ಉಪ ಮೆಯರ್ ಪಟ್ಟ ಕ್ರಮವಾಗಿ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್ ) ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.
ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು.
ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಭಾಗವಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…