ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಮತ್ತು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ನಡೆಸಿದೆ.
ಎಂಟು ಕಡೆಗಳಲ್ಲಿ ಬೆಳಗ್ಗಿನ ಜಾವ ಸುಮಾರು 3:30ರ ವೇಳೆಗೆ ದಾಳಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 –
ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದು, ಬಂದರು-ನೆಲ್ಲಿಕಾಯಿ ರಸ್ತೆಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ಪ್ರತಿಭಟನಾಕಾರ ನಿರತ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಇನ್ನು ಎನ್ಐಎ ದಾಳಿ ನಡೆದ ನೆಲ್ಲಿಕಾಯಿ ರಸ್ತೆಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…