ಮಂಗಳೂರು :ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ.
ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ.
ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್‌ಹುಡ್ ವಾಚ್’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ಗುರುತು ಚೀಟಿ ನೀಡಿ ಬಾಡಿಗೆಗೆ ಮನೆ ಪಡೆದುಕೊಂಡಿದ್ದ. ಅನಂತರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿತ್ತು. ಈಗಾಗಲೇ ಹಲವು ನಗರಗಳಲ್ಲಿ ಇಂತಹ ಬಿಗಿ ನಿಯಮ ಜಾರಿಗೊಳಿಸಲಾಗಿದ್ದು, ಶೀಘ್ರದಲ್ಲೇ ಮಂಗಳೂರು ಕೂಡಾ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…