Featured

ಮಂಗಳೂರು : ಪಿಜಿ ಆರಂಭಿಸಲು ಪೊಲೀಸ್‌ ದೃಢೀಕರಣ ಪ್ರಮಾಣಪತ್ರ ಕಡ್ಡಾಯ – Vishwanews24

ಮಂಗಳೂರು : ಪಿಜಿ ಆರಂಭಿಸಲು ಪೊಲೀಸ್‌ ದೃಢೀಕರಣ ಪ್ರಮಾಣಪತ್ರ ಕಡ್ಡಾಯ

ಮಂಗಳೂರು :ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ.

ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್‌ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್‌ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ.

ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್‌ಹುಡ್‌ ವಾಚ್‌’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ.

ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಮಹಮ್ಮದ್‌ ಶಾರೀಕ್‌ ಮೈಸೂರಿನಲ್ಲಿ ನಕಲಿ ಗುರುತು ಚೀಟಿ ನೀಡಿ ಬಾಡಿಗೆಗೆ ಮನೆ ಪಡೆದುಕೊಂಡಿದ್ದ. ಅನಂತರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಪೊಲೀಸ್‌ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಕಡ್ಡಾಯಗೊಳಿಸಲಾಗಿತ್ತು. ಈಗಾಗಲೇ ಹಲವು ನಗರಗಳಲ್ಲಿ ಇಂತಹ ಬಿಗಿ ನಿಯಮ ಜಾರಿಗೊಳಿಸಲಾಗಿದ್ದು, ಶೀಘ್ರದಲ್ಲೇ ಮಂಗಳೂರು ಕೂಡಾ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago