ಮಂಗಳೂರು: ಇಡೀ ದೇಶವು ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಈ ಸಮಯದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ವ್ಯವಸ್ಥೆಯನ್ನು ಮಾಡುತ್ತಿದೆ.
ಆ.23ರ ಬುಧವಾರ ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬ್ಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು.
ಈ ರೀತಿಯ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲಾ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಇಂತಹ ಸಾಧನೆಗಳನ್ನು ಮಾಡಲು ಸ್ಫೂರ್ತಿ ನೀಡುವ ಪ್ರಯತ್ನವನ್ನು ಮಾಡುವಂತೆ ಪ್ರಾದೇಶಿಕ ವಿಜ್ಞಾನ ಕೇಂದ್ರ ವಿನಂತಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…