Featured

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ  ; 2 ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ – vishwanews24

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ  ; ಎರಡು  ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

ಮಂಗಳೂರು : ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇನ್ನು ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಂತಿಮವಾಗಿ ಅರ್ಧ ಗಂಟೆ ಬಳಿಕ ಕದ್ರಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದೆ. ಅಲ್ಲದೆ ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago