Featured

ಮಂಗಳೂರು:  ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಯಾಗಿ ಆಗಮಿಸಿರುವ  ಬಿಳಿ ಹೆಣ್ಣು ಹುಲಿ ಕಾವೇರಿ – Vishwanews24

ಮಂಗಳೂರು:  ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಯಾಗಿ ಆಗಮಿಸಿರುವ  ಬಿಳಿ ಹೆಣ್ಣು ಹುಲಿ ಕಾವೇರಿ

ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.

ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್‌ ಹುಲಿ ಸಂಜಯ್‌, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.

ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್‌ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.

ಗುಜರಾತ್‌ನ ರಾಜಕೋಟ್‌ ಮೃಗಾಲಯದಿಂದ ಏಷ್ಯಾಟಿಕ್‌ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು ಮಹಾರಾಷ್ಟ್ರದ ಗೋರವಾದ ಮೃಗಾಲಯದಿಂದ, ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಒಡಿಶಾದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್‌ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದ ತಕ್ಷಣ ಕಾರ್ಯರೂಪಕ್ಕೆ ತರಲಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago