ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.
ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್ ಹುಲಿ ಸಂಜಯ್, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.
ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್‌ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.
ಗುಜರಾತ್‌ನ ರಾಜಕೋಟ್ ಮೃಗಾಲಯದಿಂದ ಏಷ್ಯಾಟಿಕ್ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು ಮಹಾರಾಷ್ಟ್ರದ ಗೋರವಾದ ಮೃಗಾಲಯದಿಂದ, ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಒಡಿಶಾದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದ ತಕ್ಷಣ ಕಾರ್ಯರೂಪಕ್ಕೆ ತರಲಾಗುತ್ತದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…