Featured

ಮಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ – ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್”  ಟ್ಯಾಗ್ ಲೈನ್‌ನೊಂದಿಗೆ ಕಾಂಗ್ರೆಸ್  ಪ್ರತಿಭಟನೆ – Vishwanews24

ಮಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ – ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್”  ಟ್ಯಾಗ್ ಲೈನ್‌ನೊಂದಿಗೆ ಕಾಂಗ್ರೆಸ್  ಪ್ರತಿಭಟನೆ – Vishwanews24

ಮಂಗಳೂರು: ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಜೂನ್ 11 ರ ಶುಕ್ರವಾರ ಕೆಪಿಟಿ ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್” ಎಂಬ ಟ್ಯಾಗ್ ಲೈನ್‌ನೊಂದಿಗೆ ಪ್ರತಿಭಟನೆ ನಡೆಸಿತು. ಮಾತ್ರವಲ್ಲದೆ ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ದರ 100 ಗಡಿ ದಾಟಿದ್ದಕ್ಕಾಗಿ ಕಾಂಗ್ರೆಸ್ ಕೇಕ್ ಕತ್ತರಿಸಿ ಪ್ರತಿಭಟನೆ ನಡೆಸಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ‘ಪೆಟ್ರೋಲ್ ಬೆಲೆ ಸೆಂಚುರಿ ದಾಖಲಿಸಿದ್ದು ಇದರಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಓರ್ವ ಸಾಮಾನ್ಯ ಮನುಷ್ಯ ತನ್ನ ವಾಹನಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕಿಸಿಕೊಂಡರೆ ವರ್ಷಕ್ಕೆ 25000 ರೂ. ಪಾವತಿಸಬೇಕಾಗುತ್ತದೆ. ಕೋವಿಡ್ ಜನರ ಮೇಲೆ ಪರಿಣಾಮ ಬೀರಿದ್ದು ಇದರ ನಡುವೆ ಈಗ ಇಂಧನ ಬೆಲೆಯ ಗಗನಕ್ಕೇರಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳು, ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯತ್ ಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿ ಮುಂದಿನ 100 ದಿನಗಳವರೆಗೆ ‘100 ನಾಟ್ ಔಟ್’ ಎಂದು ಪ್ರತಿಭಟಿಸುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ರಾಮನಾಥ್ ರೈ ಮಾತನಾಡಿ, ‘ಇಂಧನ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಬ್ಯಾರೆಲ್‌ಗೆ 140 ಡಾಲರ್ ಮತ್ತು ಪೆಟ್ರೋಲ್ 70 ರೂ.ಗಳನ್ನು ದಾಟಲಿಲ್ಲ. ಬೆಲೆ ಏರಿಕೆ ವಿರುದ್ದ ಎಲ್ಲಾ ನಾಗರಿಕರು ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಪ್ರತಿಭಟನೆ ನಡೆಸಬೇಕು. ಇದರಿಂದ ಇಂಧನ ಬೆಲೆ ಕುಸಿಯುತ್ತದೆ. ಸಾಂಕ್ರಾಮಿಕ ಸಮಯದಲ್ಲಿ ಬೆಲೆ ಕುಸಿತವು ಸಾಮಾನ್ಯ ಜನರಿಗೆ ಸಹಾಯ ಮಾಡುತ್ತದೆ, ಇಂಧನ ಬೆಲೆ ಕುಸಿತಕಂಡರೆ ತನ್ನಿಂತಾನೆ ಇತರ ಸರಕುಗಳ ಬೆಲೆ ಇಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ವಿಧಾನಪರಿಷತ್ ಸದಸ್ಯ ಮಾತನಾಡಿ, ಐವನ್ ಡಿಸೋಜಾ ಮಾತನಾಡಿ, ‘ಪೆಟ್ರೋಲ್ ಬೆಲೆಯ ವಿಚಾರದಲ್ಲಿ ಸರ್ಕಾರ ಕಿವುಡ ಮತ್ತು ಮೂಕವಾಗಿದೆ. ಸರ್ಕಾರ ತಮ್ಮ ಮತದಾರರಿಗೆ ಅಮೂಲ್ಯವಾದ 100 ರೂಪಾಯಿ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದೆ. ಇಂಧನ ಬೆಲೆ ಏರಿಕೆಯತ್ತ ಸಾಗುತ್ತಿದ್ದಂತೆ ಎಲ್ಲಾ ಬಿಜೆಪಿ ನಾಯಕರು ಮೌನ ಕಾಯ್ದುಕೊಳ್ಳುತ್ತಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ 60 ರಿಂದ 70 ರೂ.ಗಳವರೆಗೆ ಹೆಚ್ಚಿಸಿದಾಗ, ಬಿಜೆಪಿ ನಾಯಕರು ಸೈಕ್ಲಿಂಗ್, ಬೀದಿಗಳಲ್ಲಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿತ್ತು ಎಂದು ಹೇಳಿದರು.

ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ‘ಈ ಪ್ರತಿಭಟನೆಯೂ ಬಡ ಮತ್ತು ಸಾಮಾನ್ಯ ನಾಗರಿಕರಿಗಾಗಿ ಅದು ಬಿಟ್ಟು ಪೆಟ್ರೋಲ್ 200 ರೂ ತಲುಪಿದರೂ ಮೋದಿಯವರಿಗೆ ಮತ ಚಲಾಯಿಸುವುದಾಗಿ ಹೇಳಿಕೊಳ್ಳುವ ಅಂಧ ಭಕ್ತರಿಗೆ ಅಲ್ಲ ಎಂದು ಹೇಳಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

21 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago