ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ – vishwanews24
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ..
ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ : ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ
ಮಂಗಳೂರು: ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್ ಮುಖಾಂತ ಸಂದೇಶ ಕಳುಹಿಸಿ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.
ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ – vishwanews24
