ಮಂಗಳೂರು: ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರಿನ ಬೋಳಾರದ ಇಬ್ರಾಹಿಂ ಶಾಕೀರ್ (19), ಕುದ್ರೋಳಿಯ ಅಕ್ಬರ್ (30) ಮತ್ತು ಮುಹಮ್ಮದ್ ಹನೀಫ್ (32) ಎಂದು ಗುರುತಿಸಲಾಗಿದ್ದು, ಇವರು ಕಾರ್ಖಾನಾ ಗ್ಯಾಂಗ್ ನ ಸದಸ್ಯರು ಎಂದು ತಿಳಿದು ಬಂದಿದೆ.
2019ರ ಡಿಸೆಂಬರ್ 19ರಂದು ಸಿಎಎ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವನ್ನಪ್ಪಿದ್ದರು.
ಗಣರಾಜ್ಯೋತ್ಸವ ದಿನ ರಾಷ್ಟ್ರಧ್ವಜಕ್ಕೆ ಅಪಮಾನ ದುರದೃಷ್ಟಕರ : ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ಗೋಲಿಬಾರ್ ಘಟನೆಗೆ ಪ್ರತಿಕಾರವಾಗಿ ಪೊಲೀಸರ ಮೇಲೆ ಮಾಯಾ ಗ್ಯಾಂಗ್ ಹಾಗೂ ಕಾರ್ಖಾನಾ ಗ್ಯಾಂಗ್ ಎಂಬ ಹೆಸರಿನ ದುಷ್ಕರ್ಮಿಗಳ ತಂಡ ದಾಳಿ ನಡೆಸಲು ಯೋಜನೆ ರೂಪಿಸಿದ್ದವು. ಅದರಂತೆ 2020ರ ಡಿಸೆಂಬರ್ 16ರಂದು ಮಂಗಳೂರಿನ ನ್ಯೂ ಚಿತ್ರಾ ಟಾಕೀಸ್ ಬಳಿಯ ಚೆಕ್ಪೋಸ್ಟ್ನಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿಯಲಾಗಿತ್ತು.
ಮಾಯಾ ಗ್ಯಾಂಗ್ ತಮ್ಮ ಟೀಂನಲ್ಲಿದ್ದ ಅಪ್ರಾಪ್ತರಿಗೆ ಮತ್ತೇರಿಸುವ ಮಾತ್ರೆಗಳನ್ನು ನೀಡಿ ಪೊಲೀಸರ ಮೇಲೆ ಹಲ್ಲೆ ನಡೆಸಿತ್ತು. ಆರಂಭದಲ್ಲಿ ಅಪ್ರಾಪ್ತ ಬಾಲಕ ಮತ್ತು ಮತ್ತೋರ್ವನನ್ನು ಬಂಧಿಸಲಾಗಿತ್ತು. ಬಳಿಕ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಮತ್ತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…