ಮಂಗಳೂರು: ಬಿಜೆಪಿಗರು ಕೇವಲ ಬಾಯಿ ಮಾತಿನಲ್ಲಿ ಪ್ರಚೋದನಾಕಾರಿ ಗೋಡೆ ಬರಹ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುವುದನ್ನು ಬಿಟ್ಟು ಕೂಡಲೇ ಆರೋಪಿಗಳನ್ನು ಬಂಧಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆಗ್ರಹಿಸಿದ್ದಾರೆ.
ನಗರದ ಪ್ರಮುಖ ಗೋಡೆಗಳಲ್ಲಿ ಒಂದು ವಾರದ ಅವಧಿಯಲ್ಲಿ ಎರಡು ಕಡೆಗಳಲ್ಲಿ ಪ್ರಚೋದನಾಕಾರಿ ಬರಹಗಳು ಕಂಡುಬಂದಿದ್ದು, ಇದು ವರೆಗೆ ಯಾರನ್ನೂ ಕೂಡ ಬಂಧಿಸುವ ಕೆಲಸ ಪೊಲೀಸ್ ಇಲಾಖೆಯಿಂದ ನಡೆದಿಲ್ಲ. ಈ ನಡುವೆ ಕೆಲವೊಂದು ಸಂಘಟನೆಗಳು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಬಿಜೆಪಿ ನೇತೃತ್ವದ ಸರಕಾರ ಇರುವಾಗ ಹಿಂದೂ ಸಂಘಟನೆಗಳು ಯಾರ ವಿರುದ್ದ ಪ್ರತಿಭಟನೆ ಮಾಡಿದ್ದು ಎನ್ನುವುದು ಪ್ರಶ್ನೆಯಾಗಿದೆ.
ಹಿಂದೆಲ್ಲಾ ಎಲ್ಲಾ ಸರಕಾರಗಳು ಇರುವಾಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿಗರಿಗೆ ಈಗ ಜಿಲ್ಲೆಯಲ್ಲಿ ಪ್ರತಿನಿತ್ಯ ಕೊಲೆಗಳು, ಪ್ರಚೋದನಾಕಾರಿ ಬರಹಗಳು ಕಂಡುಬರುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ 7 ಬಿಜೆಪಿ ಶಾಸಕರು, ಸಂಸದರು ಯಾಕ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಕೊಲೆಯಾಗಿದರೂ ಓಡಿ ಬರುವ ಸಂಸದ ಶೋಭಾ ಕರಂದ್ಲಾಜೆ ಅವರಿಗೆ ಈಗ ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಅರಿವಿಲ್ಲದಿರುವುದು ಖೇದಕರ ಸಂಗತಿ. ಅವರದೇ ಬಿಜೆಪಿ ಸರಕಾರ ಇರುವಾಗ ಆರೋಪಿಗಳನ್ನು ಬಂಧಿಸಲು ಶೋಭಾ ಅವರು ಇತ್ತೀಚೆಗೆ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಆಗ್ರಹಿಸಿದ್ದು ಹಾಸ್ಯಾಸ್ಪದ. ಅವರು ಆಗ್ರಹಿಸುವ ಬದಲು ಕಾರ್ಯಾಚರಣೆ ನಡೆಸಿ ಬಂಧಿಸಲು ಆದೇಶ ಮಾಡುವುದು ಅವರ ಜವಾಬ್ದಾರಿ.
ಪೊಲೀಸ್ ಇಲಾಖೆ ಗೋಡೆ ಬರಹದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲವಾದರೆ ಮುಂದೆ ಇಂತಹ ಪ್ರಚೋದನಾಕಾರಿ ಬರಹಗಳು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕದಡುವ ಆತಂಕವಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಇಲ್ಲವಾದರೆ ಸರಕಾರದ ಅವ್ಯವಸ್ಥೆ ವಿರುದ್ಧ ಉಗ್ರ ಪ್ರತಿಭಟನೆ ಮಾಡಬೇಕಾದಿತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…