ಮಂಗಳೂರು: ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅತೀ ಶೀಘ್ರದಲ್ಲಿ ಅನುಮತಿ ನೀಡಿರುವುದು ದಾಖಲೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ, ಭ್ರಷ್ಟಚಾರವನ್ನು ಮಾಡಿಲ್ಲ. ಬಿಜೆಪಿಯವರು ಸುಳ್ಳನ್ನು ಸತ್ಯವಾಗಿಸಲು ಹೊರಟಿದ್ದಾರೆ. ಸಿಎಂ ಸಿದ್ಧರಾಮಯ್ಯನವರದ್ದು ಬಹಳ ಸ್ಪಷ್ಟವಾದ ನಡೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ಇದೆಯೆಂದೇ ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆಹಾರ ಸುರಕ್ಷತೆಯ ಬಗ್ಗೆ ತಪಾಸಣೆ ನಡೆಸಲು ಸೂಚಿಸಿದ್ದೇವೆ. ಹೋಟೆಲ್, ರೆಸ್ಟೋರೆಂಟ್, ಉತ್ಪಾದನಾ ಕೇಂದ್ರಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಮಾಂಸದ ಅಂಗಡಿಗಳಲ್ಲೂ ತಪಾಸಣೆಗಾಗಿ ಡ್ರೈವ್ ಆರಂಭಿಸಿದ್ದೇವೆ. ಪ್ರತಿ ತಿಂಗಳೂ ಮಾಧ್ಯಮಗಳಿಗೆ ವರದಿ ನೀಡಲು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಕಲಬೆರಕೆ, ಅಸುರಕ್ಷತಾ ಆಹಾರಗಳ ಬಗ್ಗೆ ಜನರಿಗೆ ತಿಳಿಯಬೇಕಿದೆ. ಕೇಕ್, ಕೋವಾದಂಹ ವಸ್ತುಗಳ ಬಗ್ಗೆ ತಪಾಸಣೆ ನಡೆಸಿದ್ದೇವೆ. ಕೇಕ್, ಬೇಕರಿ ತಿನಿಸುಗಳ ಮೇಲೆ ತಪಾಸಣಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಈಗಾಗಲೇ 4 ಆಹಾರ ಉದ್ಯಮದಾರರ ಲೈಸೆನ್ಸ್ ರದ್ದುಗೊಳಿಸಿದ್ದೇವೆ. ಜನರಿಗೆ ಜಾಗೃತಿ ಮೂಡಿಸುತ್ತಾ, ಕ್ರಮ ಕೈಗೊಳ್ಳುತ್ತಿದ್ದೇವೆ. ನಮ್ಮ ಆಹಾರಕ್ಕೂ ಆರೋಗ್ಯಕ್ಕೆ ನೇರವಾದ ಸಂಬಂಧವಿದೆ ಎಂದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…