Featured

ಮಂಗಳೂರು: ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿ : ದಿನೇಶ್ ಗುಂಡೂರಾವ್ – vishwanews24

ಮಂಗಳೂರು: ಸಿದ್ಧರಾಮಯ್ಯನವರದ್ದು ಬಹಳ ಸ್ಪಷ್ಟವಾದ ನಡೆ : ದಿನೇಶ್ ಗುಂಡೂರಾವ್

ಮಂಗಳೂರು: ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅತೀ ಶೀಘ್ರದಲ್ಲಿ ಅನುಮತಿ ನೀಡಿರುವುದು ದಾಖಲೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ, ಭ್ರಷ್ಟಚಾರವನ್ನು ಮಾಡಿಲ್ಲ. ಬಿಜೆಪಿಯವರು ಸುಳ್ಳನ್ನು ಸತ್ಯವಾಗಿಸಲು ಹೊರಟಿದ್ದಾರೆ. ಸಿಎಂ ಸಿದ್ಧರಾಮಯ್ಯನವರದ್ದು ಬಹಳ ಸ್ಪಷ್ಟವಾದ ನಡೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ಇದೆಯೆಂದೇ ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆಹಾರ ಸುರಕ್ಷತೆಯ ಬಗ್ಗೆ ತಪಾಸಣೆ ನಡೆಸಲು ಸೂಚಿಸಿದ್ದೇವೆ. ಹೋಟೆಲ್, ರೆಸ್ಟೋರೆಂಟ್, ಉತ್ಪಾದನಾ ಕೇಂದ್ರಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಮಾಂಸದ ಅಂಗಡಿಗಳಲ್ಲೂ ತಪಾಸಣೆಗಾಗಿ ಡ್ರೈವ್ ಆರಂಭಿಸಿದ್ದೇವೆ. ಪ್ರತಿ ತಿಂಗಳೂ ಮಾಧ್ಯಮಗಳಿಗೆ ವರದಿ ನೀಡಲು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಕಲಬೆರಕೆ, ಅಸುರಕ್ಷತಾ ಆಹಾರಗಳ ಬಗ್ಗೆ ಜನರಿಗೆ ತಿಳಿಯಬೇಕಿದೆ. ಕೇಕ್, ಕೋವಾದಂಹ ವಸ್ತುಗಳ ಬಗ್ಗೆ ತಪಾಸಣೆ ನಡೆಸಿದ್ದೇವೆ. ಕೇಕ್, ಬೇಕರಿ ತಿನಿಸುಗಳ ಮೇಲೆ ತಪಾಸಣಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಈಗಾಗಲೇ 4 ಆಹಾರ ಉದ್ಯಮದಾರರ ಲೈಸೆನ್ಸ್ ರದ್ದುಗೊಳಿಸಿದ್ದೇವೆ. ಜನರಿಗೆ ಜಾಗೃತಿ ಮೂಡಿಸುತ್ತಾ, ಕ್ರಮ ಕೈಗೊಳ್ಳುತ್ತಿದ್ದೇವೆ. ನಮ್ಮ ಆಹಾರಕ್ಕೂ ಆರೋಗ್ಯಕ್ಕೆ ನೇರವಾದ ಸಂಬಂಧವಿದೆ ಎಂದರು.

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

47 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago