ಮಂಗಳೂರು : ಪ್ರಯಾಣಿಕರ ವಾಹನಗಳ ಓಡಾಟಕ್ಕೆ ಸಿದ್ಧವಾಗಲಿದೆ ಪಂಪ್ವೆಲ್ ಮೇಲ್ಸೇತುವೆ -Vishwanews24

ಮಂಗಳೂರು: ಮಂಗಳೂರಿನ ಪಂಪ್ ವೆಲ್ ಪ್ಲೈ ಓವರ್ ಕಾಮಗಾರಿ ನವಯುಗ ಕಂಪೆನಿ ವಹಿಸಿಕೊಂಡು ಕಳೆದ 10 ವರ್ಷಗಳಿಂದ ಕಾಮಗಾರಿ ನಡೆಸುತ್ತಿದ್ದರೂ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಕೊನೆಗೂ ಪಂಪ್ ವೆಲ್ ಕಾಮಗಾರಿ ಜನವರಿ ತಿಂಗಳಾಂತ್ಯದ ಮುಗಿಯುವಂತೆ ಕಾಣುತ್ತದೆ.

ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮೇಲ್ಸೇತುವೆ ಜೋಡಿಸಿದ ರಸ್ತೆಗಳಿಗೆ ಡಾಂಬರು ಕೆಲಸ ನಡೆಯುತ್ತಿದೆ. ಇಲಾಖೆ ಹಿರಿಯ ಅಧಿಕಾರಿಗಳ ಪ್ರಕಾರ ‘ಇದೇ’ ಜ.28 ಅಥವಾ 29ರಂದು ಈ ಸೇತುವೆ ಪ್ರಯಾಣಿಕರ ವಾಹನಗಳ ಓಡಾಟಕ್ಕೆ ಸಿದ್ಧವಾಗಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಮ್ಮದೇ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ಉಭಯ ಕಡೆಗಳಿಂದಲೂ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸುವ ಕುರಿತು ಭರವಸೆ ದೊರೆತಿದೆ. ನಾನು ಕೂಡ ಅದೇ ರೀತಿಯ ವಿಶ್ವಾಸ ಹೊಂದಿರುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಡಿ.31ರಂದು ಸಂಸದ ನಳಿನ್‌ಕುಮಾರ್ ಕಟೀಲು ಅವರ ಅಧ್ಯಕ್ಷತೆಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಾಮಗಾರಿಯ ಮೇಲ್ವಿಚಾರಣೆ ಜವಾಬ್ದಾರಿ ಜಿಲ್ಲಾಧಿಕಾರಿಯವರಿಗೆ ನೀಡಿರುವುದು ಫಲ ನೀಡಿದೆ.
ಎನ್‌ಎಚ್‌ಎಐ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರು, ಲೋಕೋ ಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಹಾಗೂ ಮಂಗಳೂರು ತಹಸೀಲ್ದಾರರು ಇರುವ ನಾಲ್ಕು ಮಂದಿಯ ಸಮಿತಿ ಕಾಮಗಾರಿಯ ದೈನಂದಿನ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿ ಸದಸ್ಯರ ಜತೆ ಜಿಲ್ಲಾಧಿಕಾರಿ ದಿನಂಪ್ರತಿ ಸಭೆ ನಡೆಸುತ್ತಾರೆ. ಸಭೆ ಬಳಿಕ ಜಿಲ್ಲಾಧಿಕಾರಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುತ್ತಿದ್ದಾರೆ.

ನವಯುಗ ಕಂಪೆನಿಗೆ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಈ ಹಿಂದೆ ಡೆಡ್ ಲೈನ್ ಗಳ ಮೇಲೆ ಡೆಡ್ ಲೈನ್ ನೀಡಿದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿರಲಿಲ್ಲ. ಕಾಮಗಾರಿ ದಶಕದ ಇತಿಹಾಸ ಕಂಡು ಸಂಸದ ನಳಿನ್ ಕುಮಾರ್ ಸೇರಿ ಪಂಪ್ ವೆಲ್ ಪ್ಲೈ ಓವರ್ ಟ್ರೋಲಿಗರ ಆಹಾರವಾಗಿತ್ತು. ಇದೀಗ ಇದೆಲ್ಲದಕ್ಕೂ ಪೂರ್ಣವಿರಾಮ ನೀಡುವಂತೆ ಪಂಪ್ ವೆಲ್ ಪ್ಲೈ ಓವರ್ ಕಾಮಗಾರಿ ಶರವೇಗದ ಚುರುಕು ಪಡೆದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಲಾಖೆಯ ಅಧಿಕಾರಿಗಳ ಪ್ರಕಾರ ಜ.೨೯ ರ ಒಳಗೆ ಪ್ರಯಾಣಿಕ ಓಡಾಟಕ್ಕೆ ಈ ಮೇಲ್ಸೇತುವೆ ಸಿದ್ದವಾಗಲಿದೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago