ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಾರೆಗೆ `NIA’ ಅಧಿಕಾರಿಗಳು ಭೇಟಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಾರೆಗೆ `NIA’ ಅಧಿಕಾರಿಗಳು ಭೇಟಿ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಇಂದು ಎನ್ ಐಎ (NIA) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇಂದು ಎನ್ ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದ್ದು, ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವು ಅಂತರರಾಜ್ಯ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಿತ್ತು.

ಉಡುಪಿ : ಹೋಟೆಲ್, ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ – Vishwanews24

Leave a Reply