Featured

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್ ಡಿಪಿಐ ಟಿಕೆಟ್ : ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ : ಸಂಸದ ನಳಿನ್ – Vishwanews24

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್ ಡಿಪಿಐ ಟಿಕೆಟ್ : ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ : ಸಂಸದ ನಳಿನ್

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್ ಡಿಪಿಐ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಫಿ ಬೆಳ್ಳಾರೆ ಜೈಲಿನಲ್ಲಿ ಇರೋ ವ್ಯಕ್ತಿ, ಅಂಥವನಿಗೆ ಎಸ್ ಡಿಪಿಐ ಟಿಕೆಟ್ ಕೊಟ್ಟಿದೆ. ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ. ಪಿಎಫ್ಐ ಸದಸ್ಯನನ್ನು ಎಸ್ ಡಿಪಿಐ ಅಭ್ಯರ್ಥಿ ಮಾಡಿರೋದು ಸರಿಯಲ್ಲ ಎಂದಿದ್ದಾರೆ.

ಎಸ್ ಡಿಪಿಐ ಪಿಎಫ್ಐ ನ ಮತ್ತೊಂದು ಮುಖ ಎನ್ನುವುದನ್ನ ಇದರಿಂದ ಸ್ಪಷ್ಟಗೊಂಡಿದೆ. ಈ ಬಗ್ಗೆ ತನಿಖೆ ಆಗಬೇಕು, ಇವರು ಅವರ ಇನ್ನೊಂದು ಮುಖವಾಗಿದೆ. ಕಾಂಗ್ರೆಸ್ ಇದರ ಬಗ್ಗೆ ಏನ್ ಹೇಳ್ತಾರೆ ಅನ್ನೋದನ್ನ ಕೇಳಬೇಕು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಇದನ್ನ ಗೃಹ ಸಚಿವಾಲಯಗಳಿಗೆ ತಿಳಿಸ್ತೇವೆ. ಪಿಎಫ್ಐ ನಿಷೇಧಿತ ಸಂಘಟನೆಯಾಗಿದೆ. ಎಸ್ ಡಿಪಿಐ ರಾಜಕೀಯ ಸಂಘಟನೆ. ಹೀಗಿರುವಾಗ ಅವರ ಸದಸ್ಯನಿಗೆ ಇವರು ಟಿಕೆಟ್ ಕೊಡೋದು ಅಂದ್ರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago