Featured

ಮಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗಳ ಮಾಹಿತಿ ನೀಡುವವರಿಗೆ 14 ಲಕ್ಷ ರೂ. ಬಹುಮಾನ – Vishwanews24

ಮಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗಳ ಮಾಹಿತಿ ನೀಡುವವರಿಗೆ 14 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ, ಬೆಳ್ಳಾರೆ ನಿವಾಸಿ ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ನಗದು ಬಹುಮಾನ ಘೋಷಿಸಿದೆ.

ಸುಳ್ಯ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌. ತೌಫಲ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು.

ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌. ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ ಪೈಂಟರ್‌ ಸಿದ್ದಿಕ್‌ ಯಾನೆ ಗುಜರಿ ಸಿದ್ದಿಕ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ನೊಟೀಸ್‌ನಲ್ಲಿ ತಿಳಿಸಿದೆ.

ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ.

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

Vishwa News 24

Recent Posts

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

49 seconds ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

9 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

17 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

23 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

29 minutes ago

ಅ.11ರಿಂದ ಉಚ್ಚಿಲ ದಸರಾ ವೈಭವ : ಚಿನ್ನದ ಹೊಳಪಿನಲ್ಲಿ ಕಂಗೊಳಿಸಲಿದೆ ದಸರಾ ದರ್ಬಾರ್ ಮಂಟಪ – vishwanews24

ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ…

44 minutes ago