ಮಂಗಳೂರು: ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.
ಇದರಿಂದಾಗಿ ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಹಾಕಲಾಗಿದೆ.
ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿ ಯನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಿ ಎಂದು ನಳಿನ್ ಸವಾಲಯ ಹಾಕಿದರು. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಆದರೆ ನೀವು ಉದ್ಯೋಗ ನೀಡದಿದ್ದರೂ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಎಂದು ಹೇಳಿದರು. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲದಿರುವ ಬಗ್ಗೆ ದುಃಖವಿದೆ ಎಂದು ನಳಿನ್ ಹೇಳಿದರು.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…