ಮಂಗಳೂರು : ಪ್ರಸಿದ್ದಿ ಪಡೆಯಬೇಕೆಂಬ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ -Vishwanews24

ಮಂಗಳೂರು : ಪ್ರಸಿದ್ದಿ ಪಡೆಯಬೇಕೆಂಬ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ -Vishwanews24

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ನಂತೆ ಪ್ರಸಿದ್ದಿ ಪಡೆಯಬೇಕು ಎಂಬ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೇನೆ ಎಂದು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿ ಬಂಧಿತನಾಗಿದ್ದ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಉಡುಪಿಯ ಕಾರ್ಕಳ ತಾಲೂಕು ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ (33) ಈಗಾಗಲೇ ಬಂಧಿಸಲಾಗಿದ್ದು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ಕೋವಿಡ್ ಸೋಂಕು ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್‌ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್‌ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ ಪೋಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಪ್ರಚಾರ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಜನವರಿ ತಿಂಗಳಿನಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎನ್ನುವ ವ್ಯಕ್ತಿ ಸ್ಪೋಟಕವೊಂದನ್ನು ಇರಿಸಿ ದೇಶ ಹಾಗೂ ವಿದೇಶಗಳಲ್ಲಿ ಒಂದೇ ದಿನದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ. ಇದನ್ನೇ ರೋಲ್ ಮಾಡಲ್ ಆಗಿ ತೆಗೆದುಕೊಂಡ ಆರೋಪಿ ವಸಂತ್ ಗೂಗಲ್ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಂಬರ್ ಹುಡುಕಿದ್ದಾನೆ. ಕೇವಲ 8 ನೇ ತರಗತಿ ಕಲಿತಿರುವ ಈತನಿಗೆ ಗೂಗಲ್ ನಲ್ಲಿ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಾದ ವಾಸುದೇವ್ ರಾವ್ ನಂಬರ್ ಸಿಕ್ಕಿದೆ. ಅವರನ್ನೇ ನಿಲ್ದಾಣದ ನಿರ್ದೇಶಕರು ಎಂದು ತಿಳಿದು ಆತ ಬೆದರಿಕೆಯ ಕರೆ ಮಾಡಿದ್ದಾನೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಹಾಗೂ ಇತರ ಸೆಕ್ಷನ್ ಮೂಲಕ ಆರೋಪಿಯನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago