ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು ಎನ್ನುವ ವಾದಕ್ಕೆ ತುಳುನಾಡಿನ ರಾಜಕಾರಣಿಗಳ ಬೆಂಬಲ ದೊರಕಿದ್ದು, ಈ ಬಗ್ಗೆ ಶುಕ್ರವಾರ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಸಲ್ಲಿಸಿದ್ದು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ಕೋರಿದ್ದಾರೆ.
ಈ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಅವರು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ತುಳು ಭಾಷೆಯಲ್ಲಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ತುಳು ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡಬೇಕು ಎನ್ನುವ ನಿಟ್ಟಿನಲ್ಲಿ ಇತ್ತೀಚೆಗೆ ಜೈ ತುಳುನಾಡ್ ಸೇರಿದಂತೆ ಹಲವಾರು ತುಳು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೇ, ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಹೋರಾಟ ನಡೆಸಿದ್ದರು. ಇದರೊಂದಿಗೆ ತುಳು ಭಾಷೆಯ ಉತ್ತೇಜನಕ್ಕಾಗಿ ಟ್ವಿಟ್ಟರ್ ಅಭಿಯಾನವನ್ನು ಕೂಡಾ ಮಾಡಿದ್ದರು. ಪ್ರಸ್ತುತ ರಾಜಕಾರಣಿಗಳು ಸೇರಿದಂತೆ ಸೆಲೆಬ್ರಿಟಿಗಳು ಹಾಗೂ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…