Featured

ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು: ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಾಮತ್‌‌ -Vishwanews24

ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು: ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ

ಶಾಸಕ ಕಾಮತ್‌‌ -Vishwanews24

ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು ಎನ್ನುವ ವಾದಕ್ಕೆ ತುಳುನಾಡಿನ ರಾಜಕಾರಣಿಗಳ ಬೆಂಬಲ ದೊರಕಿದ್ದು, ಈ ಬಗ್ಗೆ ಶುಕ್ರವಾರ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಸಲ್ಲಿಸಿದ್ದು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ಕೋರಿದ್ದಾರೆ.

ಈ ಬಗ್ಗೆ ಶಾಸಕ ವೇದವ್ಯಾಸ್‌ ಕಾಮತ್‌ ಅವರು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ತುಳು ಭಾಷೆಯಲ್ಲಿ ಫೇಸ್‌ಬುಕ್‌‌ನಲ್ಲಿ ಬರೆದುಕೊಂಡಿದ್ದಾರೆ.

ತುಳು ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡಬೇಕು ಎನ್ನುವ ನಿಟ್ಟಿನಲ್ಲಿ ಇತ್ತೀಚೆಗೆ ಜೈ ತುಳುನಾಡ್‌ ಸೇರಿದಂತೆ ಹಲವಾರು ತುಳು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೇ, ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಹೋರಾಟ ನಡೆಸಿದ್ದರು. ಇದರೊಂದಿಗೆ ತುಳು ಭಾಷೆಯ ಉತ್ತೇಜನಕ್ಕಾಗಿ ಟ್ವಿಟ್ಟರ್‌ ಅಭಿಯಾನವನ್ನು ಕೂಡಾ ಮಾಡಿದ್ದರು. ಪ್ರಸ್ತುತ ರಾಜಕಾರಣಿಗಳು ಸೇರಿದಂತೆ ಸೆಲೆಬ್ರಿಟಿಗಳು ಹಾಗೂ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

3 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

12 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

19 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

42 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

48 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

58 minutes ago