ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು.
ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದ. ಯುವತಿ ಡಿಸೆಂಬರ್ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…