Featured

ಮಂಗಳೂರು: ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ರಜನಿ ಶೆಟ್ಟಿ ಆಯ್ಕೆ – Vishwanews24

ಮಂಗಳೂರು: ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ರಜನಿ ಶೆಟ್ಟಿ ಆಯ್ಕೆ

ಮಂಗಳೂರು : ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು 2022ನೇ ಸಾಲಿನ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ನಡೆಸಿದೆ. ಮಾ.5ರಂದು ಮಂಗಳೂರಿನ ಬೊಕ್ಕಪಟ್ಣ ಸಮೀಪದ ಪ್ಯಾರಡೈಸ್ ಐಲ್ಯಾಂಡ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆ ಸಮಾರಂಭದಲ್ಲಿ ರಜನಿ ಶೆಟ್ಟಿಯವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಜನಿ ಶೆಟ್ಟಿ ಪರಿಚಯ:

ಮಂಗಳೂರಿನ ಮಣ್ಣಗುಡ್ಡೆಯಲ್ಲಿ ಪುಟ್ಟ ಬಾಡಿಗೆ ಮನೆಯಲ್ಲಿ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿರುವ ರಜನಿ ಶೆಟ್ಟಿ, ತಮ್ಮ ಮನೆಯನ್ನು ಗಾಯಗೊಂಡ, ರೋಗಗ್ರಸ್ತ ನಾಯಿ, ಬೆಕ್ಕು, ಹಕ್ಕಿಗಳಿಗೆ ಮೀಸಲಿಟ್ಟಿದ್ದಾರೆ.

ಬೀದಿ ಬದಿ ಬರಡಾಗುವ ಬದುಕು, ವಾಹನಗಳ ಅಡಿಗೆ ಸಿಲುಕಿಯೋ, ಯಾವುದಾದರೂ ವಿಷ ತಿಂದು ಸಾಯುವ ಪರಿಸ್ಥಿತಿಯ ಬೀದಿ ನಾಯಿಗಳಿಗೂ ಬದುಕುವ ಹಕ್ಕಿದೆ ಎನ್ನುವುದನ್ನು ಮನಗಂಡು, ತಮ್ಮ ಪಾಡಿಗೆ ಸದ್ದಿಲ್ಲದೆ ಪ್ರಾಣಿಗಳ ಸೇವೆ ಮಾಡಿಕೊಂಡು ಬಂದವರು ರಜನಿ ಶೆಟ್ಟಿ.

ನಾಯಿ, ಬೆಕ್ಕು ಬಾವಿಗೆ ಬಿದ್ದಾಗ ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಬರುವ ಮೊದಲೇ ದೂರವಾಣಿ ಕರೆ ಸ್ವೀಕರಿಸಿ, ಸರ ಸರನೆ ಬಾವಿಗಿಳಿದು ಮೇಲೆತ್ತುವುದರಲ್ಲಿ ರಜನಿ ಶೆಟ್ಟಿಯವರದ್ದು ಎತ್ತಿದ ಕೈ. ಅನೇಕ ನಾಯಿ, ಬೆಕ್ಕುಗಳನ್ನು ಅವರು ರಕ್ಷಣೆ ಮಾಡಿದ್ದಾರೆ. ಮರ ಕಡಿಯುವಾಗ ಗಾಯಗೊಂಡ ಹಕ್ಕಿಗಳನ್ನೂ ಅವರು ತಮ್ಮ ಮನೆಯ ಗೂಡಿನಲ್ಲಿರಿಸಿ ಆರೈಕೆ ಮಾಡುತ್ತಾರೆ. ಗಿಳಿ, ಹದ್ದುಗಳಿಗೂ ರಜನಿಯಕ್ಕನ ಮನೆಯಲ್ಲಿ ಆಸರೆ ಸಿಕ್ಕಿದೆ.

ರಜನಿ ಅವರ ಮನೆಯಲ್ಲಿ ಪ್ರತಿದಿನ 60 ಕೆಜಿ ಅಕ್ಕಿಯಿಂದ ಚಿಕನ್ ಮಿಶ್ರಿತ ಅನ್ನ ಬೇಯುತ್ತಿರುತ್ತದೆ. ಇದನ್ನು ಅವರು 800ಕ್ಕೂ ಹೆಚ್ಚು ನಾಯಿಗಳಿಗೆ ಬಡಿಸುತ್ತಾರೆ. ಮಗಳು ಅಥವಾ ಪತಿ ದಾಮೋದರ್ ಶೆಟ್ಟಿಯವರ ಜೊತೆ ಸ್ಕೂಟರ್‌ನಲ್ಲಿ ತೆರಳಿ ನಾಯಿಗಳ ಮೈದಡವಿ, ಊಟ ಹಾಕಿ ಬರುತ್ತಾರೆ. ಗೂಡ್ಸ್ ಶೆಡ್‌ನಂತಹ ಮಂಗಳೂರಿನ ಮೂಲೆಗೂ ತೆರಳಿ, ಆಹಾರ ಹಾಕುತ್ತಾರೆ. ರಜನಿಯವರನ್ನು ಕಂಡ ಕೂಡಲೇ ನಾಯಿಗಳು ಬಾಲವನ್ನಾಡಿಸುತ್ತಾ ಓಡೋಡಿ ಬಂದು ಸುತ್ತುವರಿದು ಪ್ರೀತಿ ತೋರುತ್ತವೆ.

16 ವರ್ಷಗಳಿಂದ ನಾಯಿಗಳಿಗೆ ಊಟ ಹಾಕುವ ಅವರು, 2500ರಷ್ಟು ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಆರಂಭದಲ್ಲಿ ಸ್ವಂತ ದುಡಿಮೆಯ ಹಣದಿಂದ ನಾಯಿಗಳಿಗೆ ಊಟ ಬೇಯಿಸಿ ಹಾಕುತ್ತಿದ್ದರೆ, ಈಗ ಬಿರುವೆರ್ ಕುಡ್ಲದಂತಹ ಸಂಘಟನೆಗಳು, ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

24 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

24 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago