ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳು ಇನ್ನೂ ಎರಡು ಹೆಚ್ಚುವರಿ ವಾಹನಗಳನ್ನು ಬಳಸಿರುವುದು ತಿಳಿದು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಜತೆ ನಿಯಮಾನುಸಾರವೇ ವ್ಯವಹರಿಸಲಾಗಿದೆ. ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆ ರೀತಿ ಯಾವುದೇ ಆರೋಪಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಕೆಲವು ಪ್ರಮುಖರು ಈ ಬಗ್ಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ’ ಎಂದರು.
‘ಫಾಝಿಲ್ ಕುಟುಂಬದ ಬಹುತೇಕ ಸದಸ್ಯರ ಬಳಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ಫೋನ್ ನಂಬರ್‌ಗಳು ಇವೆ. ಏನಾದರೂ ಅನುಮಾನಗಳು ಇದ್ದಲ್ಲಿ ಗಮನಕ್ಕೆ ತರಬಹುದು. ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ’ ಎಂದರು.
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…