Featured

ಮಂಗಳೂರು: ಫಾಝಿಲ್ ಹತ್ಯೆ ಆರೋಪಿಗಳಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ: ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ಮಂಗಳೂರು: ಫಾಝಿಲ್ ಹತ್ಯೆ ಆರೋಪಿಗಳಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ: ಎನ್.

ಶಶಿಕುಮಾರ್ ಸ್ಪಷ್ಟನೆ

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳು ಇನ್ನೂ ಎರಡು ಹೆಚ್ಚುವರಿ ವಾಹನಗಳನ್ನು ಬಳಸಿರುವುದು ತಿಳಿದು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಜತೆ ನಿಯಮಾನುಸಾರವೇ ವ್ಯವಹರಿಸಲಾಗಿದೆ. ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆ ರೀತಿ ಯಾವುದೇ ಆರೋಪಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೆಲವು ಪ್ರಮುಖರು ಈ ಬಗ್ಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ’ ಎಂದರು.

‘ಫಾಝಿಲ್ ಕುಟುಂಬದ ಬಹುತೇಕ ಸದಸ್ಯರ ಬಳಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ಫೋನ್ ನಂಬರ್‌ಗಳು ಇವೆ. ಏನಾದರೂ ಅನುಮಾನಗಳು ಇದ್ದಲ್ಲಿ ಗಮನಕ್ಕೆ ತರಬಹುದು. ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ’ ಎಂದರು.

ಇವತ್ತು ನಾವು ಸ್ವಾತಂತ್ರ್ಯ ಆಗಿರುವುದಕ್ಕೆ ಕಾಂಗ್ರೆಸ್ ‌ಕಾರಣ..

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

18 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

18 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

21 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

21 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

21 hours ago