ಮಂಗಳೂರು: ಸುರತ್ಕಲ್‌ನ ಮಂಗಳಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಮುಹಮ್ಮದ್ ಫಾಝಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಡಿಜಿಪಿ ಆಲೋಕ್ ಕುಮಾರ್ ಸ್ವತಃ ತನಿಖೆಯ ಉಸ್ತುವಾರಿ ವಹಿಸಿದ್ದು, ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಇದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದೆ ಜಿಲ್ಲೆಯಲ್ಲಿ ಡಿಸಿಪಿಯಾಗಿದ್ದ, ಪ್ರಸ್ತುತ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್ ಅವರನ್ನೂ ಮತ್ತೆ ತನಿಖೆಗಾಗಿ ಕರೆಯಿಸಲಾಗಿದೆ.
” ನಾವು ಇಲ್ಲಿಯವರೆಗೆ 21 ಕ್ಕೂ ಹೆಚ್ಚು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ . ಇವರೆಲ್ಲರೂ ಶಂಕಿತರಾಗಿದ್ದು ವಿಚಾರಣೆ ನಡೆಸುತ್ತಿದ್ದೇವೆ. ನಮಗೆ ಸಂಸ್ಥೆ, ಸಂಘಟನೆಗಳು ಯಾವುದೇ ಇತರ ಲಿಂಕ್ ನಮಗೆ ಮುಖ್ಯವಲ್ಲ. ಹಂತಕರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ” ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೊಬೈಲ್ ಕರೆಗಳ ಮಾಹಿತಿ , ಯಾವ ಕಾರಣಕ್ಕೆ ಕೊಲೆ ನಡೆದಿದೆ, ಪ್ರವೀಣ್ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ , ಸಿಸಿಟಿವಿ ಫೂಟೇಜ್ ಎಲ್ಲ ಮಾಹಿತಿ ಕ್ರೋಡಿಕರಿಸಿ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…