Featured

ಮಂಗಳೂರು: ಫಾಝಿಲ್‌ ಹತ್ಯೆ – 21 ಮಂದಿ ಪೊಲೀಸ್ ವಶಕ್ಕೆ ; ಹಂತಕರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ : ಶಶಿಕುಮಾರ್ – Vishwanews24

ಮಂಗಳೂರು: ಫಾಝಿಲ್‌ ಹತ್ಯೆ – 21 ಮಂದಿ ಪೊಲೀಸ್ ವಶಕ್ಕೆ ; ಹಂತಕರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ : ಶಶಿಕುಮಾರ್

ಮಂಗಳೂರು: ಸುರತ್ಕಲ್‌ನ ಮಂಗಳಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಮುಹಮ್ಮದ್‌ ಫಾಝಿಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್‌, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಡಿಜಿಪಿ ಆಲೋಕ್‌ ಕುಮಾರ್‌ ಸ್ವತಃ ತನಿಖೆಯ ಉಸ್ತುವಾರಿ ವಹಿಸಿದ್ದು, ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಇದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದೆ ಜಿಲ್ಲೆಯಲ್ಲಿ ಡಿಸಿಪಿಯಾಗಿದ್ದ, ಪ್ರಸ್ತುತ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್‌ ಅವರನ್ನೂ ಮತ್ತೆ ತನಿಖೆಗಾಗಿ ಕರೆಯಿಸಲಾಗಿದೆ.

” ನಾವು ಇಲ್ಲಿಯವರೆಗೆ 21 ಕ್ಕೂ ಹೆಚ್ಚು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ . ಇವರೆಲ್ಲರೂ ಶಂಕಿತರಾಗಿದ್ದು ವಿಚಾರಣೆ ನಡೆಸುತ್ತಿದ್ದೇವೆ. ನಮಗೆ ಸಂಸ್ಥೆ, ಸಂಘಟನೆಗಳು ಯಾವುದೇ ಇತರ ಲಿಂಕ್ ನಮಗೆ ಮುಖ್ಯವಲ್ಲ. ಹಂತಕರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ” ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಮೊಬೈಲ್ ಕರೆಗಳ ಮಾಹಿತಿ , ಯಾವ ಕಾರಣಕ್ಕೆ ಕೊಲೆ ನಡೆದಿದೆ, ಪ್ರವೀಣ್‌ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ , ಸಿಸಿಟಿವಿ ಫೂಟೇಜ್‌ ಎಲ್ಲ ಮಾಹಿತಿ ಕ್ರೋಡಿಕರಿಸಿ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago