Featured

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ದುರಂತ ಸಂಭವಿಸಿದ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಲಾಗಿದೆ.

ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಹಾಗೂ ನಿಝಾಮುದ್ದೀನ್ ಸಾಬ್ ಎಂಬವರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಾಫತ್ ಆಲಿ ಎಂಬವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಇನ್ನು ಹಸನ್ ಅಲಿ, ಮುಹಮ್ಮದ್ ಕರೀಮುಲ್ಲಾ ಮತ್ತು ಹಫೀಝುಲ್ಲಾ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

46 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

55 minutes ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

1 hour ago