ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್ ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಲ ವಿದ್ಯಾರ್ಥಿಗಳು ಎದುರಾಳಿ ತಂಡವನ್ನು ಬೆಂಬಲಿಸಿದ ಕಾರಣದಿಂದಾಗಿ ಎರಡು ತಂಡಗಳ ನಡುವೆ ಜಗಳ ಉಂಟಾಗಿತ್ತು.
ಇದೇ ವಿಚಾರವನ್ನಿಟ್ಟುಕೊಂಡು ಸೋಮವಾರ(ಆ.19ರಂದು) ಸಂಜೆ 6:15ರ ಹೊತ್ತಿಗೆ ಪಾಂಡೇಶ್ವರ ಫೋರಂ ಮಾಲ್ ಬಳಿ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ಹುಡುಗನ ಮೇಲೆ ದಿಯಾನ್, ತಸ್ಲಿಮ್, ಸಲ್ಮಾನ್ ಮತ್ತು ಇತರ ಇಬ್ಬರು 17 ವರ್ಷದ ಅಪ್ರಾಪ್ತ ಹುಡುಗರು ಹಲ್ಲೆ ಮಾಡಿದ್ದರು.
17 ವರ್ಷದ ಅಪ್ರಾಪ್ತ ಹುಡುಗ ಹಾಗೂ ಆತನ ಸ್ನೇಹಿತರನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಕೈ ಕಾಲಿನಿಂದ ಹಲ್ಲೆಗೈದಿದ್ದಾರೆ. ಮಹಾಕಾಳಿ ಪಡ್ಪು, ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳು ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಎನ್ನುವ ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…