Featured

ಮಂಗಳೂರು : ಫುಟ್‌ ಬಾಲ್‌ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ – vishwanews24

ಮಂಗಳೂರು : ಫುಟ್‌ ಬಾಲ್‌ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ

ಮಂಗಳೂರು: ಫುಟ್‌ ಬಾಲ್‌ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್‌ ಬಾಲ್‌ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಲ ವಿದ್ಯಾರ್ಥಿಗಳು ಎದುರಾಳಿ ತಂಡವನ್ನು ಬೆಂಬಲಿಸಿದ ಕಾರಣದಿಂದಾಗಿ ಎರಡು ತಂಡಗಳ ನಡುವೆ ಜಗಳ ಉಂಟಾಗಿತ್ತು.
ಇದೇ ವಿಚಾರವನ್ನಿಟ್ಟುಕೊಂಡು ಸೋಮವಾರ(ಆ.19ರಂದು) ಸಂಜೆ 6:15ರ ಹೊತ್ತಿಗೆ ಪಾಂಡೇಶ್ವರ ಫೋರಂ ಮಾಲ್ ಬಳಿ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ಹುಡುಗನ ಮೇಲೆ ದಿಯಾನ್, ತಸ್ಲಿಮ್, ಸಲ್ಮಾನ್ ಮತ್ತು ಇತರ ಇಬ್ಬರು 17 ವರ್ಷದ ಅಪ್ರಾಪ್ತ ಹುಡುಗರು ಹಲ್ಲೆ ಮಾಡಿದ್ದರು.
17 ವರ್ಷದ ಅಪ್ರಾಪ್ತ ಹುಡುಗ ಹಾಗೂ ಆತನ ಸ್ನೇಹಿತರನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಕೈ ಕಾಲಿನಿಂದ ಹಲ್ಲೆಗೈದಿದ್ದಾರೆ. ಮಹಾಕಾಳಿ ಪಡ್ಪು, ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ.

 

ಹಲ್ಲೆಗೊಳಗಾದ ವಿದ್ಯಾರ್ಥಿಗಳು ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿಗಳನ್ನು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಎನ್ನುವ ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

8 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

8 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

8 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

11 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

11 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

11 hours ago