ಮಂಗಳೂರು: ಆಹಾರ ಸೇವನೆಯ ಬಳಿಕ ಒಂದೇ ಕುಟುಂಬದ ನಾಲ್ವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಗಣೇಶ್ (52), ಪಭಾವತಿ (45), ಅವರ ಮಕ್ಕಳಾದ ಸೌರಭ್ (20) ಮತ್ತು ಪ್ರತೀಕ್ (18) ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
ರಾತ್ರಿ ಮನೆಯಲ್ಲಿ ಹೆಸರು ಬೇಳೆ ತಿಂದು ಬಳಿಕ ಐಸ್ ಕ್ರೀಂ ಸೇವನೆ ಮಾಡಿ ಮಲಗಿದ್ದರು. ಆದರೆ, ಬೆಳಗ್ಗೆ ಅವರು ಅಸ್ವಸ್ಥಗೊಂಡಿದ್ದಾರೆ. ಇಂದು ಬೆಳಗಾದರೂ ಬಾಗಿಲು ತೆರೆಯದ ಕಾರಣ ಅವರ ಸಂಬಂಧಿಗಳಾದ ಕೌಶಿಕ್, ಮಂಜುನಾಥ್, ಮತ್ತು ರೇಣುಕಾ ಎಂಬುವವರು ಮನೆಗೆ ಬಂದು ಬಾಗಿಲು ತೆಗಿಸಿದ್ದು, ವಾಂತಿ ಭೇದಿ ಮಾಡಿ ತೀವ್ರ ನಿತ್ರಾಣಗೊಂಡಿದ್ದ ನಾಲ್ವರನ್ನು ನಗರದ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ICU ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ವರ ಆರೋಗ್ಯ ಕೂಡ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…