Featured

ಮಂಗಳೂರು: ಫೆ. 11ರಿಂದ 15ರ ವರೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ – vishwanews24

ಮಂಗಳೂರು: ಫೆ. 11ರಿಂದ 15ರ ವರೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಈ ಬಾರಿಯ ವರ್ಷಾವಧಿ ಮಹಾಪೂಜೆಗೆ ಮುಂಚಿತವಾಗಿ ಫೆ. 11ರಿಂದ 15ರ ವರೆಗೆ ಬ್ರಹ್ಮಕಲಶೋತ್ಸವ ನೆರವೇರಲಿದೆ ಎಂದು ಪ್ರಧಾನ ಸಂಚಾಲಕ ಗೌತಮ್‌ ಸಾಲ್ಯಾನ್‌ ಕೋಡಿಕಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಫೆ. 11ರಂದು ಬ್ರಹ್ಮಕಲಶೋತ್ಸವ ವಿಧಿ ಆರಂಭವಾಗಲಿದ್ದು, 13ರಂದು ಪುನಃ ಪ್ರತಿಷ್ಠೆ, 15ರಂದು ಬ್ರಹ್ಮಕಲಶೋತ್ಸವ, 16ರಂದು ವರ್ಷಾವಧಿ ಮಹಾಪೂಜೆ ಪ್ರಸಾದ ಹಾರಿಸುವಿಕೆ, 23ರಂದು ಚಂಡಿಕಾಯಾಗ, 26, 27ರಂದು ವರ್ಷಾವಧಿ ಪೂಜೆ ಮತ್ತು ಮಾ. 2ರಂದು ಮಲರಾಯ ನೇಮ ನೆರವೇರಲಿದೆ ಎಂದರು.

ಗರ್ಭಗುಡಿಯ ದುರಸ್ತಿ ಸಹಿತ ದೇವಸ್ಥಾನದ ಸುತ್ತು ಪೌಳಿಗಳನ್ನು ನವೀಕರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ. 30ರಂದು ಕ್ಷೇತ್ರದ ಗರ್ಭಗುಡಿಯಲ್ಲಿರುವ ಶ್ರೀ ಮಾರಿಯಮ್ಮ ದೇವಿ ಮತ್ತು ಪರಿವಾರದ ಇತರ ವಿಗ್ರಹ ಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಕ್ಷೇತ್ರದ ಮುಂಭಾಗದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬೃಹತ್‌ ಸಭಾಂಗಣ ಶ್ರೀ ಮಾರಿಯಮ್ಮ ಸಮುದಾಯ ಭವನದ ಕಾಮಗಾರಿ ಗಳು ಅಂತಿಮ ಹಂತದಲ್ಲಿದ್ದು, ಜನವರಿ ಯಲ್ಲಿ ಉದ್ಘಾಟನೆ ನೆರವೇರಲಿದೆ ಎಂದು ತಿಳಿಸಿದರು.

ಕ್ಷೇತ್ರದ ನವೀಕರಣ, ನೂತನ ಬೃಹತ್‌ ಸಭಾಂಗಣ ನಿರ್ಮಾಣ, ಬ್ರಹ್ಮಕಲಶೋತ್ಸವಗಳನ್ನು ಯಶಸ್ವಿಯಾಗಿ ನಡೆಸುವ ಉದ್ದೇಶಕ್ಕಾಗಿ ಡಾ| ಜಿ. ಶಂಕರ್‌ ಗೌರವಾಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಗಿದೆ. ಸಂಸದ ನಳಿನ್‌ ಕುಮಾರ್‌ ಕಟೀಲು ಹಾಗೂ ಶಾಸಕ ವೇದವ್ಯಾಸ ಕಾಮತ್‌ ಗೌರವಾಧ್ಯಕ್ಷ ರಾಗಿರುತ್ತಾರೆ. ಅವಿಭಜಿತ ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಗೌರವ ಸಲಹೆಗಾರರಾಗಿರುತ್ತಾರೆ ಎಂದು ಹೇಳಿದರು.

ಕ್ಷೇತ್ರದ ಆಡಳಿತ ಮೊಕ್ತೇಸರ ಲಕ್ಷ್ಮಣ್‌ ಅಮೀನ್‌ ಕೋಡಿಕಲ್‌ ಮಾತನಾಡಿ, ಮಂಗಳೂರಿನ ಇತಿಹಾಸದಲ್ಲೇ ನಡೆಯದ ರೀತಿಯ ಬ್ರಹ್ಮಕಲಶೋತ್ಸವ ನಡೆಸಲು ಸಿದ್ಧತೆ ನಡೆಸುತ್ತಿದ್ದೇವೆ ಎಂದರು.

ಮೊಗವೀರ 7 ಪಟ್ಣ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್‌ ಸುವರ್ಣ ಕುದ್ರೋಳಿ-3, ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಬಂಗೇರ ಬೋಳೂರ, ಸಮಿತಿಯ ಉಪಾಧ್ಯಕ್ಷ ಕುಮಾರ್‌ ಮೆಂಡನ್‌ ಬೈಕಂಪಾಡಿ, ಕೋಶಾಧಿಕಾರಿ ವಸಂತ ಅಮೀನ್‌ ಬೈಕಂಪಾಡಿ, ಆರ್ಥಿಕ ಸಮಿತಿಯ ಮೋಹನ್‌ ಬೆಂಗ್ರೆ, ಪ್ರಚಾರ ಸಮಿತಿಯ ಯಶವಂತ್‌ ಬೋಳೂರು ಮತ್ತು ಸುಭಾಷ್‌ ಕುಂದರ್‌ ಇದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

17 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

18 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

18 hours ago