Featured

ಮಂಗಳೂರು: ಫೆ. 15ರವರೆಗೆ ಕೋವಿಡ್ ನಿಯಂತ್ರಣ ಪರಿಷ್ಕೃತ ಮಾರ್ಗಸೂಚಿ ಜಾರಿ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ – Vishwanews24

ಮಂಗಳೂರು: ಫೆ.15ರವರೆಗೆ ಕೋವಿಡ್ ನಿಯಂತ್ರಣ ಪರಿಷ್ಕೃತ ಮಾರ್ಗಸೂಚಿ ಜಾರಿ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ – Vishwanews24

ಮಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಅವರು ಆದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ಜನವರಿ 31ರಿಂದ ಜಾರಿಗೆ ಬರುವಂತೆ ಪ್ರತಿರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ.

2 ಡೋಸ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪಬ್, ಕ್ಲಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳು ಹಾಗೂ ಹೋಟೆಲ್ ಗಳಲ್ಲಿ ತಿನ್ನುವ ಸ್ಥಳಗಳಿಗೆ ಶೇ. 100 ರಷ್ಟು ಆಸನ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಮದುವೆ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶವನ್ನು .ಕಲ್ಪಿಸಲಾಗಿದೆ.ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರ, ಸಭಾಭವನ ಗಳಲ್ಲಿ ಶೇಕಡ 50 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ದೇವಾಲಯಗಳಲ್ಲಿ ದರ್ಶನ ಮತ್ತು ಸೇವೆಗೆ ಅವಕಾಶ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ :

ರ್‍ಯಾಲಿ, ಧರಣಿ, ಸಮಾವೇಶ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.ಕ್ರೀಡಾ ಸಂಕೀರ್ಣ, ಸ್ಟೇಡಿಯಂ, ಈಜುಕೊಳ ಮತ್ತು ಜಿಮ್ ಗಳಲ್ಲಿ ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.ಸರ್ಕಾರಿ ಕಚೇರಿಗಳಲ್ಲಿ ಶೇಕಡ 100 ರಷ್ಟು ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸಲಾಗುವುದು.

ಸಂಬಂಧಪಟ್ಟ ಅಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಈಗಾಗಲೇ ಹೊರಡಿಸಲಾದ ಕೋವಿಡ್ 19 ನಿಯಂತ್ರಣ ಕ್ರಮಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಗಳು ಪರಿಣಾಮಕಾರಿಯಾಗಿ ಪಾಲನೆ ಯಾಗುತ್ತಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಯಾವುದೇ ವ್ಯಕ್ತಿ, ಜನರ ಗುಂಪು, ಸಮುದಾಯ, ಸಂಘ ,ಸಂಸ್ಥೆ , ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಇತ್ಯಾದಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವುದು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಅನುಸರಿಸದಿರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2022 ರ ಕಲಂ 4, 5 ಮತ್ತು 10 ರಂತೆ ಹಾಗೂ ಇತರ ಕಾನೂನು ನಿಬಂಧನೆಗಳ ಅನ್ವಯ ಕ್ರಮ ಕೈಗೊಳ್ಳಲಾಗುವುದು.

ತಕ್ಷಣದಲ್ಲಿ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಖಾಸಗಿ ಆಸ್ಪತ್ರೆಗಳು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಹಾಸಿಗೆಗಳನ್ನು ಸರ್ಕಾರ ಉಲ್ಲೇಖಿಸಿದ ಮತ್ತು ಖಾಸಗಿ ರೋಗಿಗಳ ನಡುವೆ ಹಂಚಿಕೊಳ್ಳಲು ಕೆಳಗಿನಂತೆ ಮಾರ್ಪಡಿಸಲಾಗಿದೆ. ಪ್ರತಿ ವರ್ಗದಲ್ಲಿ ಶೇಕಡ 10ರಷ್ಟು ಹಾಸಿಗೆಗಳು ಹಾಸಿಗೆಗಳು ಐಸಿಯು, ಐಸಿಯು ವಿತ್ ವೆಂಟಿಲೇಟರ್, ಹೆಚ್ ಡಿ ಯು, ಮತ್ತು ಸಾಮಾನ್ಯ ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಸೂಚಿಸಿದ ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ :

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago