ಮಂಗಳೂರು : ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಇಲ್ಲಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿವೆ.
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಮಾರ್ಚ್ 18 ರಂದು ಇಲ್ಲಿನ ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವ ದಂಧೆಗೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಇದುವರೆಗೆ ಬಂಧಿಸಲಾಗಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…