ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜೂ.29ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ಜಾನುವಾರುಗಳನ್ನು ಅನಧಿಕೃತವಾಗಿ ವಧೆ ಮಾಡುವ ಮತ್ತು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.
ಎಲ್ಲಾ ಇಲಾಖೆಗಳ ಸಮನ್ವಯ ಸಾಧಿಸಿ ಮುಂಬರುವ ಬಕ್ರೀದ್ ಹಬ್ಬದ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಅನಧಿಕೃತ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮತ್ತು ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಾನುವಾರು ಸಾಗಾಣಿಕೆ ಪರವಾನಿಗೆ ಅನ್ ಲೈನ್ ತಂತ್ರಾಂಶದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು ಅನಧಿಕೃತ ಜಾನುವಾರು ಸಾಗಾಣಿಕೆ ತಡೆಗಟ್ಟಲು ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಉಪಾಯುಕ್ತ ಅಂಶುಕುಮಾರ್, ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ರವಿಕುಮಾರ್ ಎಂ, ದ.ಕ.ಜಿಪಂ ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಎನ್., ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಡಾ. ರವಿ ಡಿ.ಆರ್ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…