Featured

ಮಂಗಳೂರು: ಬಜಪೆ ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಣೆ – Vishwanews24

ಮಂಗಳೂರು: ಬಜಪೆ ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಣೆ

ಮಂಗಳೂರು: ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದ ಫ್ಲ್ಯಾಟ್‌ನಲ್ಲಿ ಇದ್ದಕಿದ್ದಂತೆ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ.

ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ದಟ್ಟವಾದ ಹೊಗೆ ಮೇಲಿನ ಮಹಡಿಗಳಲ್ಲಿ ಆವರಿಸಿತ್ತು. ಕೊಠಡಿಗಳಲ್ಲಿ ಹೊಗೆ ತುಂಬಿದಾಗ ಘಟನೆಯ ಬಗ್ಗೆ ಮೇಲ್ಗಡೆ ಇದ್ದವರ ಗಮನಕ್ಕೆ ಬಂದಿತ್ತು. ಗಾಬರಿಗೊಂಡ ಅವರು ಕೂಡಲೇ ನೆರವಿಗಾಗಿ ಬೊಬ್ಬೆ ಹಾಕಿದರು. ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.

ಇಡೀ ಫ್ಲ್ಯಾಟ್‌ನಲ್ಲಿ ಹೊಗೆ ಆವರಿಸಿದ್ದರಿಂದ ಕೂಡಲೇ ಆಪತ್ಭಾಂಧವ ಗುರುಪುರದ ರಫೀಕ್‌ ಅವರನ್ನು ಕರೆಸಿ ಅವರ ಜತೆ ಸ್ಥಳೀಯರೂ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲಾ 30 ಜನರನ್ನು ರಕ್ಷಿಸಿದರು. ವಿದ್ಯುತ್‌ ಮೀಟರ್‌ ಬೋರ್ಡ್‌ ಸುಟ್ಟು ಹೋಗಿದ್ದರಿಂದ ಫ್ಲ್ಯಾಟ್‌ನಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತ್ತು.

ಹಾಗಾಗಿ ಮೊಬೈಲ್‌ ಪೋನ್‌ಗಳ ಬೆಳಕಿನಲ್ಲಿಯೇ ಸಂಪೂರ್ಣ ಕಾರ್ಯಾಚರಣೆ ನಡೆಸಲಾಯಿತು. ಅಪಾರ್ಟ್‌ಮೆಂಟ್‌ ನ ಕೊಠಡಿಗಳಲ್ಲಿ ಸಿಲುಕಿದ್ದವರನ್ನು ಮುಖಕ್ಕೆ ಬಟ್ಟೆ ಕಟ್ಟಿ ಉಸಿರಾಟಕ್ಕೆ ತೊಂದರೆಯಾಗದಂತೆ ಹೊಗೆಯಿಂದ ರಕ್ಷಿಸಿ ಕೆಳಗಡೆ ಕರೆದೊಯ್ಯಲಾಯಿತು.

ಕೆಲವರು ಅಲ್ಪ ಸ್ವಲ್ಪ ಉಸಿರಾಟದ ಅನುಭವಿಸಿದರೂ ಬಳಿಕ ಚೇತರಿಸಿಕೊಂಡಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಸುಮಾರು 10 ವರ್ಷ ಹಳೆಯ ಫ್ಲ್ಯಾಟ್‌ ಆಗಿದ್ದು, 21 ಮನೆಗಳಿವೆ. ಬೆಂಕಿ ಅಪಘಾತ ಸಂಭವಿಸಿದಾಗ ಐದಾರು ಮನೆಗಳಲ್ಲಿ ಮಾತ್ರ ಜನರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago