ಮಂಗಳೂರು : ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ ಲಸಿಕೆಗೆ ಉತ್ತೇಜನ ನೀಡುವ ಮೂಲಕ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪರೋಕ್ಷವಾಗಿ ಮಂಗಳೂರು ಸಹಿತ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಸಹಕಾರಿಯಾಗಲಿದೆ. ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವುದರಿಂದ ಅನೇಕ ಉದ್ಯೋಗ ಹಾಗೂ ವ್ಯವಹಾರಗಳು ಸೃಷ್ಟಿಯಾಗಲಿವೆ. ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಮೀನುಗಾರರ ಬಹುಕಾಲದ ಬೇಡಿಕೆ ಈಡೇರಿಸಿದ್ದ ಕೇಂದ್ರ ಸರ್ಕಾರ ಈಗ ಮತ್ಸೃ ಸಂಪದ ಯೋಜನೆ ಮುಂದುವರಿಸಿದ್ದು ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್, ಮುಂದಿನ 5 ವರ್ಷಗಳಲ್ಲಿ 3 ಕೋಟಿ ಹೊಸ ಮನೆ ನಿರ್ಮಾಣ, ಹೆಚ್ಚಿನ ಮೆಡಿಕಲ್ ಕಾಲೇಜು ನಿರ್ಮಾಣ ಸ್ವಾಗತಾರ್ಹವಾಗಿದೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…