ಮಂಗಳೂರು; ಮಂಗಳೂರು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಿಗಳಲ್ಲಿ ಹಿಂದೂ ದೇವರ ಕುರಿತಂತೆ ಅವಹೇಳನಕಾರಿಯಾಗಿ ಬರೆದು ಹಾಕಿ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ.
ಮಂಗಳೂರು ನಗರದ ಬಾಬುಗಡ್ಡೆಯಲ್ಲಿರುವ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಇದರ ಕಾಣಿಕೆ ಡಬ್ಬಿಗೆ ಯಾರೋ ಕಿಡಿಗೇಡಿಗಳು 2೦೦ ರೂ ಖೋಟಾನೋಟಿನಲ್ಲಿ ಅಸಭ್ಯವಾಗಿ ಬರಹ ಬರೆದು ಮತ್ತು ಬಳಸಿದ ಕಾಂಡೋಮ್‌ನ್ನು ಹಾಕಿದ ಘಟನೆ ನಡೆದಿದೆ.
ಕಳೆದ ಗುರುವಾರ ದೈವಸ್ಥಾನದ ಕಾಣಿಕೆ ಡಬ್ಬಿ ತೆರೆಯುವ ವೇಳೆ ಈ ಬರಹವುಳ್ಳ ನೋಟು ಮತ್ತು ಚೀಟಿ ಪತ್ತೆಯಾಗಿದೆ. ಇದರಲ್ಲಿ ಪ್ರಚೋದನಕಾರಿ ಬರಹಗಳನ್ನು ನೋಟಿನಲ್ಲಿ ಬರೆಯಲಾಗಿದೆ. ನೋಟಿನ ಗಾಂಧೀಜಿ ಚಿತ್ರವನ್ನೂ ವಿರೂಪ ಮಾಡಲಾಗಿದೆ.
ಇಲ್ಲಿಗೆ ಸಮೀಪದ ಇನ್ನೊಂದು ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಇದೇ ರೀತಿಯ ಅವಹೇಳನಕಾರಿ ಬರಹಗಳನ್ನು ಹಾಕಲಾಗಿದೆ. ದೇವಸ್ಥಾನ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾರ್ಥನೆ: ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ಊರ ಭಕ್ತಾದಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಗರ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಭರತ್ ಕುಮಾರ್ ಎಸ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಎಚ್, ಅಖಿಲ ಭಾರತ ಮುಂಡಾಲ ಯುವ ವೇದಿಕೆ, ವಿಶ್ವಹಿಂದು ಪರಿಷತ್, ಬಜರಂಗದಳ ಅತ್ತಾವರ ಚಕ್ರಪಾಣಿ ಶಾಖೆ ಮತ್ತು ಛತ್ರಪತಿ ಶಾಖೆ ಬಾಬುಗುಡ್ಡ ಶಾಖೆ ಸದಸ್ಯರುಗಳು ಉಪಸ್ಥಿತರಿದ್ದರು.
http://ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು :ಹೆಚ್.ಡಿ.ಕುಮಾರಸ್ವಾಮಿ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…