Featured

ಮಂಗಳೂರು: ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬಿಗಳಲ್ಲಿ ಅವಹೇಳನಕಾರಿ ಬರಹ ಪತ್ತೆ , ನಗರದ ಮೂರು ದೈವಸ್ಥಾನಗಳಲ್ಲಿ ದುಷ್ಕರ್ಮಿಗಳಿಂದ ಇಂತಹ ಕೃತ್ಯ -Vishwanews24

ಮಂಗಳೂರು : ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬಿಗಳಲ್ಲಿ ಅವಹೇಳನಕಾರಿ ಬರಹ ಪತ್ತೆ , ನಗರದ ಮೂರು ದೈವಸ್ಥಾನಗಳಲ್ಲಿ ದುಷ್ಕರ್ಮಿಗಳಿಂದ ಇಂತಹ ಕೃತ್ಯ -Vishwanews24

ಮಂಗಳೂರು; ಮಂಗಳೂರು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಿಗಳಲ್ಲಿ ಹಿಂದೂ ದೇವರ ಕುರಿತಂತೆ ಅವಹೇಳನಕಾರಿಯಾಗಿ ಬರೆದು ಹಾಕಿ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ.

ಮಂಗಳೂರು ನಗರದ ಬಾಬುಗಡ್ಡೆಯಲ್ಲಿರುವ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಇದರ ಕಾಣಿಕೆ ಡಬ್ಬಿಗೆ ಯಾರೋ ಕಿಡಿಗೇಡಿಗಳು 2೦೦ ರೂ ಖೋಟಾನೋಟಿನಲ್ಲಿ ಅಸಭ್ಯವಾಗಿ ಬರಹ ಬರೆದು ಮತ್ತು ಬಳಸಿದ ಕಾಂಡೋಮ್‌ನ್ನು ಹಾಕಿದ ಘಟನೆ ನಡೆದಿದೆ.

ಕಳೆದ ಗುರುವಾರ ದೈವಸ್ಥಾನದ ಕಾಣಿಕೆ ಡಬ್ಬಿ ತೆರೆಯುವ ವೇಳೆ ಈ ಬರಹವುಳ್ಳ ನೋಟು ಮತ್ತು ಚೀಟಿ ಪತ್ತೆಯಾಗಿದೆ. ಇದರಲ್ಲಿ ಪ್ರಚೋದನಕಾರಿ ಬರಹಗಳನ್ನು ನೋಟಿನಲ್ಲಿ ಬರೆಯಲಾಗಿದೆ. ನೋಟಿನ ಗಾಂಧೀಜಿ ಚಿತ್ರವನ್ನೂ ವಿರೂಪ ಮಾಡಲಾಗಿದೆ.

ಇಲ್ಲಿಗೆ ಸಮೀಪದ ಇನ್ನೊಂದು ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಇದೇ ರೀತಿಯ ಅವಹೇಳನಕಾರಿ ಬರಹಗಳನ್ನು ಹಾಕಲಾಗಿದೆ. ದೇವಸ್ಥಾನ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾರ್ಥನೆ: ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ಊರ ಭಕ್ತಾದಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಗರ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಭರತ್ ಕುಮಾರ್ ಎಸ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಎಚ್, ಅಖಿಲ ಭಾರತ ಮುಂಡಾಲ ಯುವ ವೇದಿಕೆ, ವಿಶ್ವಹಿಂದು ಪರಿಷತ್, ಬಜರಂಗದಳ ಅತ್ತಾವರ ಚಕ್ರಪಾಣಿ ಶಾಖೆ ಮತ್ತು ಛತ್ರಪತಿ ಶಾಖೆ ಬಾಬುಗುಡ್ಡ ಶಾಖೆ ಸದಸ್ಯರುಗಳು ಉಪಸ್ಥಿತರಿದ್ದರು.

http://ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು :ಹೆಚ್‌.ಡಿ.ಕುಮಾರಸ್ವಾಮಿ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago